Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:44
22 ತಿಳಿವುಗಳ ಹೋಲಿಕೆ  

ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.


ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.”


ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.


ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು