ಯೆರೆಮೀಯ 48:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಕೆನ್ನೆಯನ್ನೂ ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 “ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ, ಸೀಹೋನನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ, ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವುದು. ಅಧ್ಯಾಯವನ್ನು ನೋಡಿ |