Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ಆದರೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:47
22 ತಿಳಿವುಗಳ ಹೋಲಿಕೆ  

ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.


ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು