Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಅಡವಿಯ ಕಾಡುಕತ್ತೆಯಂತೆ ಓಡಿಹೋಗಿ ಪ್ರಾಣ ಉಳಿಸಿಕೊಳ್ಳಿ’ ಎನ್ನುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವದಕ್ಕಾಗಿ ಓಡಿಹೋಗಿರಿ. ಮರುಭೂಮಿಯಲ್ಲಿರುವ ಕಾಡುಕತ್ತೆಯಂತೆ ಓಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಮರುಭೂಮಿಯಲ್ಲಿರುವ ಒಣ ಗಿಡದ ಹಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:6
10 ತಿಳಿವುಗಳ ಹೋಲಿಕೆ  

ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು