ಯೆರೆಮೀಯ 49:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ? ಅಧ್ಯಾಯವನ್ನು ನೋಡಿ |