ಯೆರೆಮೀಯ 49:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ. ಅಧ್ಯಾಯವನ್ನು ನೋಡಿ |