ಯೆರೆಮೀಯ 49:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |