ಯೆರೆಮೀಯ 49:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋವಿುನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳುಕೊಳ್ಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”