ಯೆರೆಮೀಯ 49:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |