Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆಷ್ಬೋನಿನವರೇ, ಗೋಳಾಡಿರಿ; ಆಯಿ ಎಂಬ ಊರು ಹಾಳಾಯಿತು! ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:3
28 ತಿಳಿವುಗಳ ಹೋಲಿಕೆ  

ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.


ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.


ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.


ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,


ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.


ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.


ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,


ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.


ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು