Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾವಿುನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:34
12 ತಿಳಿವುಗಳ ಹೋಲಿಕೆ  

ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,


ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.


ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು