Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದರಿದವರನ್ನು ಕೂಡಿಸುವದಕ್ಕೆ ಯಾರೂ ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:5
16 ತಿಳಿವುಗಳ ಹೋಲಿಕೆ  

“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.


ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.


ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು