Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಯೆಹೋವನನ್ನು ಅಲ್ಲಗಳೆದು - ಆತನು ಏನು ಮಾಡಿಯಾನು? ನಮಗೆ ಕೇಡುಬಾರದು, ಖಡ್ಗವೂ ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:12
25 ತಿಳಿವುಗಳ ಹೋಲಿಕೆ  

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.


ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು