Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು; ಇದು ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಯೆಹೂದವೇ, ಆ ಭಯಂಕರ ದಿನಗಳು ಬಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ, ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:18
10 ತಿಳಿವುಗಳ ಹೋಲಿಕೆ  

“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.


ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.


ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು