Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:24
27 ತಿಳಿವುಗಳ ಹೋಲಿಕೆ  

ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.


ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.


ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.


ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು