Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚುವ ಹಾಗೆ ಹೊಂಚುಹಾಕುತ್ತಾರೆ; ಬೋನೊಡ್ಡಿ ಮನುಷ್ಯರನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:26
16 ತಿಳಿವುಗಳ ಹೋಲಿಕೆ  

ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.


ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.


ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು