Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಹೆಚ್ಚಿ ಧನವಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:27
14 ತಿಳಿವುಗಳ ಹೋಲಿಕೆ  

ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.


ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.


ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು