ಯೆರೆಮೀಯ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.