Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅತ್ತಿತ್ತ ಓಡಾಡುವ ಕೊಬ್ಬಿದ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನೂ ಕೆನೆಯುತ್ತಾನೆ ತನ್ನ ನೆರೆಯವನ ಹೆಂಡತಿಯನ್ನು ನೋಡಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಹೇಕರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಮನದಣಿಯುವ ಹಾಗೆ ತಿಂದು ಕೊಬ್ಬಿ ಕಾಮವೇರಿದ ಕುದುರೆಗಳಂತಿದ್ದಾರೆ. ಅವರು ನೆರೆಮನೆಯವನ ಹೆಂಡತಿಯನ್ನು ಕೆನೆತು ಕರೆಯುವ ಕುದುರೆಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:8
15 ತಿಳಿವುಗಳ ಹೋಲಿಕೆ  

ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”


“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”


ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.


ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.


“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ


ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.


ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು