Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ನುಡಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:1
22 ತಿಳಿವುಗಳ ಹೋಲಿಕೆ  

ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.


ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.


ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು