ಯೆರೆಮೀಯ 50:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೀಜಬಿತ್ತುವವನನ್ನೂ ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು. ಅಧ್ಯಾಯವನ್ನು ನೋಡಿ |