Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:17
38 ತಿಳಿವುಗಳ ಹೋಲಿಕೆ  

ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.


ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.


ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.


ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು