Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:2
34 ತಿಳಿವುಗಳ ಹೋಲಿಕೆ  

ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.


ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,


ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!


ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.


ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.


“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು