Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:28
14 ತಿಳಿವುಗಳ ಹೋಲಿಕೆ  

ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು