Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:29
28 ತಿಳಿವುಗಳ ಹೋಲಿಕೆ  

ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.


ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”


ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.


ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.


“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.


ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು