Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:3
22 ತಿಳಿವುಗಳ ಹೋಲಿಕೆ  

ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”


ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.


ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.


ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು