ಯೆರೆಮೀಯ 50:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು. ಅಧ್ಯಾಯವನ್ನು ನೋಡಿ |