ಯೆರೆಮೀಯ 50:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರು ಯೆಹೂದ್ಯರು ಉಭಯರು ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆಗೆ ಒಯ್ಯುವವರೆಲ್ಲರು ಅವರನ್ನು ಬಿಟ್ಟುಬಿಡುವುದಿಲ್ಲವೆಂದು, ಬಲವಾಗಿ ಪಟ್ಟುಹಿಡಿದಿದ್ದಾರೆ. ಅಧ್ಯಾಯವನ್ನು ನೋಡಿ |