Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:34
32 ತಿಳಿವುಗಳ ಹೋಲಿಕೆ  

“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.


ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.


ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು