Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಈ ಕಾರಣ, ತೋಳಗಳೂ ಕಾಡುಮೃಗಗಳೂ ಬೀಡುಮಾಡುವುವಲ್ಲಿ. ಉಷ್ಟ್ರಪಕ್ಷಿಗಳೂ ತಂಗುವುವು ಅಲ್ಲಿ. ಅದೆಂದಿಗೂ ನಿವಾಸಸ್ಥಳ ಆಗದು ತಲತಲಾಂತರಕ್ಕೂ ಜನರು ಅಲ್ಲಿ ಒಕ್ಕಲಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಹಕ್ಕೆಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ನಿವಾಸಸ್ಥಳವಾಗದು, ತಲತಕಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:39
12 ತಿಳಿವುಗಳ ಹೋಲಿಕೆ  

ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು