Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:42
23 ತಿಳಿವುಗಳ ಹೋಲಿಕೆ  

ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.


ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.


ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.


ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.


“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು