Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:43
8 ತಿಳಿವುಗಳ ಹೋಲಿಕೆ  

ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,


ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.


ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು