Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:44
18 ತಿಳಿವುಗಳ ಹೋಲಿಕೆ  

ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.


ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು