ಯೆರೆಮೀಯ 50:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು. ಅಧ್ಯಾಯವನ್ನು ನೋಡಿ |