Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. ಬನ್ನಿ, ಅದರ ಬಗ್ಗೆ ನಾವು ಚೀಯೋನಿನಲ್ಲಿ ಹೇಳೋಣ. ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:10
18 ತಿಳಿವುಗಳ ಹೋಲಿಕೆ  

ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.


ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು