Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವು ವ್ಯರ್ಥವಾದವುಗಳು, ಹಾಸ್ಯಾಸ್ಪದ ಕೃತಿಗಳು, ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ವಿಗ್ರಹಗಳು ನಿಷ್ಪ್ರಯೋಜಕವಾದವುಗಳೇ. ಆ ವಿಗ್ರಹಗಳನ್ನು ಮಾಡಿದವರು ಜನರೇ. ಅವುಗಳು ಕೇವಲ ಹಾಸ್ಯಾಸ್ಪದ ವಸ್ತುಗಳಲ್ಲದೆ ಮತ್ತೇನೂ ಅಲ್ಲ. ಅವುಗಳ ಬಗ್ಗೆ ತೀರ್ಪುಕೊಡುವ ಕಾಲ ಬರುವದು; ಆ ವಿಗ್ರಹಗಳನ್ನು ನಾಶಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ; ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:18
18 ತಿಳಿವುಗಳ ಹೋಲಿಕೆ  

“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.


ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


“‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು