Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು. ಅವರು ಅದನ್ನು ಗಾಳಿಗೆ ತೂರಿಬಿಡುವರು. ನಿಯಮಿತ ವಿಪತ್ಕಾಲದಲ್ಲಿ ಆ ದೇಶಕ್ಕೆ ಮುತ್ತಿಗೆ ಹಾಕಿ ಅದನ್ನು ಬಟ್ಟಬರಿದು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನ್ಯಜನರನ್ನು ಬಾಬೆಲಿಗೆ ಕಳುಹಿಸುವೆನು, ಅವರು ಅದನ್ನು ತೂರುವರು, ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯವಿುತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೂರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದು ಮಾಡುವರು; ಏಕೆಂದರೆ ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:2
9 ತಿಳಿವುಗಳ ಹೋಲಿಕೆ  

ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು