Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ಬಾಬೆಲೇ,] ನೀನು ನನಗೆ ಗದೆಯು, ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಜ್ಜಿಹಾಕಲೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:20
20 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.


ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು