Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಥವನ್ನೂ ಸಾರಥಿಯನ್ನೂ ಸ್ತ್ರೀಪುರುಷರನ್ನೂ ಬಾಲವೃದ್ಧರನ್ನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನಿಂದ ಬಾಲವೃದ್ಧರನ್ನು ಒಡೆದುಬಿಡುತ್ತೇನೆ; ನಿನ್ನಿಂದ ಯುವತೀ ಯುವಕರನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಹಿರಿಯರನ್ನೂ, ಕಿರಿಯರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಯುವಕನನ್ನೂ ಯುವತಿಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:22
14 ತಿಳಿವುಗಳ ಹೋಲಿಕೆ  

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.


ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.


ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.


ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು