ಯೆರೆಮೀಯ 51:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಗದೆಯಿಂದ ಒಡೆದುಬಿಡುವೆನು ಕುರುಬನನ್ನೂ ಮಂದೆಯನ್ನೂ ರೈತನನ್ನೂ ನೊಗದೆತ್ತುಗಳನ್ನೂ ದೇಶಾಧಿಪತಿಗಳನ್ನೂ ನಾಡಿನೊಡೆಯರನ್ನೂ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿನ್ನಿಂದ ಕುರುಬರನ್ನೂ ಹಿಂಡನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರೈತನನ್ನೂ ನೊಗದ ಎತ್ತುಗಳನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ದೇಶಾಧಿಪತಿಗಳನ್ನೂ ನಾಡೊಡೆಯರನ್ನೂ ಒಡೆದುಬಿಡುತ್ತೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ. ಅಧ್ಯಾಯವನ್ನು ನೋಡಿ |