ಯೆರೆಮೀಯ 51:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ಇಂತೆನ್ನುತ್ತಾನೆ - ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಜರಿಯ ಮೇಲಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |