Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 [ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:34
21 ತಿಳಿವುಗಳ ಹೋಲಿಕೆ  

ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.


ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.


“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.


ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.


ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.


ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.


ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.


ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು