Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:36
24 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.


ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.


ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,


ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು