Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:44
24 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.


ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.


ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.


ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.


ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು