Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:47
13 ತಿಳಿವುಗಳ ಹೋಲಿಕೆ  

“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು