Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 “ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇವಿುನ ಹಂಬಲು ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:50
24 ತಿಳಿವುಗಳ ಹೋಲಿಕೆ  

ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.


ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.


ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು