Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬಾಬಿಲೋನನ್ನು ನಾನು ಹಾಳುಮಾಡಿಬಿಡುತ್ತೇನೆ ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತೇನೆ. ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ಅಲೆ ಅಲೆಯಾಗಿ ಬಂದ ಶತ್ರುಗಳು ಘೋಷಿಸಿ ಆರ್ಭಟಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಬಲು ಗದ್ದಲವನ್ನು ಅಣಗಿಸಿಬಿಡುತ್ತಾನೆ; ಮಹಾಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, ಅವುಗಳ ಶಬ್ದದ ಧ್ವನಿಯು ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:55
18 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.


ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.


ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,


ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು