Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:56
32 ತಿಳಿವುಗಳ ಹೋಲಿಕೆ  

ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


“ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.


ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.


ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.


“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.


ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;


“ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”


ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು