ಯೆರೆಮೀಯ 51:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.” ಅಧ್ಯಾಯವನ್ನು ನೋಡಿ |