Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:1
12 ತಿಳಿವುಗಳ ಹೋಲಿಕೆ  

ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.


ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.


ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.


ಲಿಬ್ನಾ, ಎತೆರ್, ಆಷಾನ್,


ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.


ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು